ನ್ಯೂಸ್

ಅ.17, ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್...

ಕೊಡಗು: ತಲಕಾವೇರಿಯಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 17 ರಂದು ಮಧ್ಯಾಹ್ನ 01 ಗಂಟೆ 11 ನಿಮಿಷಕ್ಕೆ ಕಾವೇರಿ ತೀರ್ಥೋದ್ಭವ ನಡೆಯಲಿದೆ.

ಕರೊನಾ ಕಾರಣದಿಂದ ಈ ಬಾರಿ ತೀರ್ಥೋದ್ಭವ ನಡೆಯುವುದು ಅನುಮಾನವಾಗಿತ್ತು. ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ, ಪ್ರತಿವರ್ಷದಂತೆ ಈ ಬಾರಿಯೂ ತೀರ್ಥೋದ್ಭವ ನಡೆಯಲಿದೆ. ಅಕ್ಟೋಬರ್ 17 ರಂದು ಮಕರ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದ್ದಾಳೆ.