ಕೊಪ್ಪಳ: ಮಳೆ ಅಬ್ಬರ ಜೋರಾಗಿದ್ದು, ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳದಲ್ಲಿ ಮನೆ ಕುಸಿದು ಬಿದ್ದು ವೃದ್ಧೆ ಸೇರಿದಂತೆ 20 ದಿನದ ಹಸುಗೂಸು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಮನೆ ಕುಸಿತದಿಂದ ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ.
ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು, ಈಕೆಯನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀರಾಳ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.