ನಾಡಹಬ್ಬ ದಸರಾ ಉದ್ಘಾಟಕರಾಗಿ ಕೊಪ್ಪಳದ ಗವಿ ಸಿದ್ದೇಶ್ವರ ಸ್ವಾಮೀಜಿ ಆಯ್ಕೆ: ಸಿಎಂ ಡಿಕೆಶಿ ಘೋಷಣೆ 
ನ್ಯೂಸ್

ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟಕರಾಗಿ ಕೊಪ್ಪಳದ ಗವಿ ಸಿದ್ದೇಶ್ವರ ಸ್ವಾಮೀಜಿ ಆಯ್ಕೆ: ಸಿಎಂ ಡಿಕೆಶಿ ಘೋಷಣೆ

ಈ ವರ್ಷದ ಅದ್ಧೂರಿ ಮೈಸೂರು ದಸರಾ ಹಬ್ಬವನ್ನು ಉದ್ಘಾಟಿಸಲು ಕೊಪ್ಪಳದ ಗವಿ ಸಿದ್ದೇಶ್ವರ ಮಠದ ಸ್ವಾಮೀಜಿಯವರು ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಇಂದಿನ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಈ ಮಧ್ಯೆ ಯಾರು ಈ ವರ್ಷದ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂಬ ಗೊಂದಲ, ಪ್ರಶ್ನೆಗಳಿಗೆ ಇದೀಗ ಕೊನೆಗೂ ಉತ್ತರ ಲಭಿಸಿದೆ.

ಈ ವರ್ಷದ ಅದ್ಧೂರಿ ಮೈಸೂರು ದಸರಾ ಹಬ್ಬವನ್ನು ಉದ್ಘಾಟಿಸಲು ಕೊಪ್ಪಳದ ಗವಿ ಸಿದ್ದೇಶ್ವರ ಮಠದ ಸ್ವಾಮೀಜಿಯವರು ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಇಂದಿನ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾಡಿನ ಬರ ಪರಿಸ್ಥಿತಿ, ಕಸ್ತೂರಿ ರಂಗನ್​ ವರದಿ ವಿವಾದ ಮತ್ತು ರಾಜಕೀಯ ಪಕ್ಷಗಳ ವಿರೋಧ, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಕಷ್ಟು ವಿಷಯಗಳನ್ನು ಚರ್ಚಿಸಿದ ಮುಖ್ಯಮಂತ್ರಿಗಳು, ಪ್ರಮುಖ ವಿಷಯಗಳ ಬಳಿಕ ಈ ಬಾರಿಯ ಮೈಸೂರು ದಸರಾ ಉದ್ಘಾಟಕರ ಹೆಸರನ್ನು ಬಹಿರಂಗಪಡಿಸಿದರು.

ಕಳೆದ ವರ್ಷ ಅಂದರೆ 2025ರ ದಸರಾ ಮಹೋತ್ಸವವನ್ನು ಭಾನು ಮುಷ್ತಾಕ್​ ಅವರು ಉದ್ಘಾಟಿಸಿದರು. ರಾಜ್ಯ ಸರ್ಕಾರ ಮುಷ್ತಾಕ್​ ಅವರ ಹೆಸರನ್ನು ಘೋಷಿಸಿದ ದಿನದಿಂದಲೂ ಉದ್ಘಾಟನೆಯವರೆಗೂ ಈ ವಿಚಾರ ಭಾರಿ ವಿವಾದಕ್ಕೆ ಗುರಿಯಾಗಿತ್ತು. ಸರ್ಕಾರದ ಆಯ್ಕೆಯನ್ನು ವಿರೋಧ ಪಕ್ಷಗಳು ಪ್ರಶ್ನಿಸಿ, ತೀವ್ರ ಅಸಮಾಧಾನ ಹೊರಹಾಕಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.