ಕೋಟೆಕೇರಿ ಭಗವಾನ್ 1008 ಶ್ರೀ ಚಂದ್ರನಾಥ ತೀರ್ಥಂಕರ ಮತ್ತು ಶ್ರೀ ಅನಂತನಾಥ ತೀರ್ಥಂಕರ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾಪನಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಎಂ.ಎ.ಸುದರ್ಶನ ಕುಮಾರ್, ದುಗ್ಗಣ್ಣ ಸಾವಂತರು ಮೊದಲಾದವರಿದ್ದರು.
- ಧಾರ್ಮಿಕ ಸಭಾ ಕಾರ್ಯಕ್ರಮ
- ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾಪನಾ ಮಹೋತ್ಸವ
ಮೂಲ್ಕಿ: ಕೋಟೆಕೇರಿ ಭಗವಾನ್ 1008 ಶ್ರೀ ಚಂದ್ರನಾಥ ತೀರ್ಥಂಕರ ಮತ್ತು ಶ್ರೀ ಅನಂತನಾಥ ತೀರ್ಥಂಕರ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾಪನಾ ಮಹೋತ್ಸವ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಬಸದಿಯಲ್ಲಿ ನಡೆಯಿತು.
ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಸ್ವಸ್ತಿಶ್ರೀ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎ.ಸುದರ್ಶನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಪಡುಬಿದ್ರೆ ಬೀಡು ಅರಸರಾದ ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳ್, ಸುನಂದಾ ವಿಲಾಸ್ ಉಪಾಧ್ಯೆ ಕೊಲ್ಲಾಪುರ, ಶಾಸಕ ಉಮಾನಾಥ ಎ.ಕೋಟ್ಯಾನ್, ವಾಸ್ತು ಸಲಹೆಗಾರ ಡಾ.ಪಾದೂರು ಸುದರ್ಶನ್ ಕುಮಾರ್, ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಕುಲ್ಯಾಡಿ ನರಸಿಂಹ ಪೈ, ವಕೀಲರಾದ ಶ್ವೇತಾ ಜೈನ್, ಮೂಡುಬಿದಿರೆ, ಮೂಲ್ಕಿ ನಪಂ ಮಾಜಿ ಅಧ್ಯಕ್ಷ ಸತೀಶ್ ಅಂಚನ್, ಕೆ.ಪಿ.ಜಗದೀಶ್ ಅಧಿಕಾರಿ, ಜಯಕೃಷ್ಣ ಪರಿಸರ ಸಮಿತಿಯ ಜಯಕೃಷ್ಣ ಶೆಟ್ಟಿ, ಕ್ಷೇತ್ರದ ಆಡಳಿತ ಮೊಕ್ತೇಸರ ಅಶೋಕ್ ಕುಮಾರ್ ಇಂದ್ರ ಮತ್ತಿತರರು ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ, ಸುಧೀರ್‌ಕುಮಾರ್ ಎರ್ಮಾಳ್ ಸ್ವಾಗತಿಸಿದರು. ನವಿತಾ ಜೈನ್ ನಿರೂಪಿಸಿದರು. ಸಾಧಕರನ್ನು ಹಾಗೂ ದಾನಿಗಳನ್ನು ಗೌರವಿಸಲಾಯಿತು.