ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಾಗಿ ಬರೆದುಕೊಂಡಿದ್ದ ಆರೋಪದಡಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ರನ್ನು ಬಂಧಿಸಲಾಗಿದೆ.
ನಿನ್ನೆ(ಭಾನುವಾರ) ಅಮಿತ್ ಷಾ ಅವರಿಗೆ ಕರೊನಾ ದೃಢಪಟ್ಟ ಬೆನ್ನಲ್ಲೇ ಅವರ ಬಗ್ಗೆ ಆನಂದ್ ಪ್ರಸಾದ್ ತನ್ನ ಟ್ವಿಟರ್ ಖಾತೆಯಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಿದ್ದರು.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1)(b), 505(1) (C),153 ಐಪಿಸಿ ಸೆಕ್ಷನ್ ಅಡಿ ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.