ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ಆಗಸ್ಟ್ 24 ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು http://kpsc.kar.nic.in ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಒಟ್ಟು 106 ಹುದ್ದೆಗಳ ಭರ್ತಿಗೆ ಈ ನೇಮಕಾತಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.