KPSC: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 2023-24ನೇ ಸಾಲಿನ ಗೆಜೆಟೆಡ್ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ.
ಇದೇ ಮಾರ್ಚ್ 28, 29 ಮತ್ತು ಏ.1, 2ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸರ್ಕಾರ, ಮಾರ್ಚ್ 28, 29 ಮತ್ತು ಏ.1, 2ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಶೀಘ್ರದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ವೆಬ್ಸೈಟ್ನಲ್ಲಿ ಮುಂದಿನ ದಿನಾಂಕದ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿಲಾಗುವುದು ಎಂದು ಉಲ್ಲೇಖಿಸಿದ್ದಾರೆ.