ನ್ಯೂಸ್

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ; ಕೆಆರ್‌ಎಸ್ ಡ್ಯಾಂ ಗರಿಷ್ಟ ಮಟ್ಟ ತಲುಪಲು ಕ್ಷಣಗಣನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್ ಡ್ಯಾಂ ಗರಿಷ್ಟ ಮಟ್ಟ ತಲುಪಲು ಕ್ಷಣಗಣನೆ ಆರಂಭಗೊಂಡಿದೆ. ಈಗಾಗಲೇ ಕಾವೇರಿ ನೀರಾವರಿ ನಿಗಮ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದು, ಡ್ಯಾಂಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ ನೀರು ಹರಿಸುವ ಸಾಧ್ಯತೆ ಇದೆ.

ಅಣೆಕಟ್ಟಿನಿಂದ ಸುಮಾರು 10 ಸಾವಿರ ಕ್ಯೂಸೆಕ್‌ನಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು, ಆದ್ದರಿಂದ ನದಿಪಾತ್ರದ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸುವುದರ ಜತೆಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆ ಹೊರಡಿಸಿದ್ದಾರೆ.

124.80 ಅಡಿ ಗರಿಷ್ಟ ಸಂಗ್ರಹದ ಅಣೆಕಟ್ಟೆಯಲ್ಲಿ ಪ್ರಸ್ತುತ 117 ಅಡಿ ನೀರು ಸಂಗ್ರಹವಾಗಿದೆ. ಒಳಹರಿವಿನ ಪ್ರಮಾಣ ನಿರಂತರವಾಗಿ ಹೆಚ್ಚುತ್ತಿದೆ. ಡ್ಯಾಂಗೆ 44,617 ಕ್ಯೂಸೆಕ್ ಒಳಹರಿವು ಬಂದಿದೆ. 120 ಅಡಿ ಆಗುತ್ತಿದ್ದಂತೆ ಡ್ಯಾಂನಿಂದ ನದಿಗೆ ನೀರು ಹರಿಸಲು ಸಿದ್ಧತೆ ನಡೆದಿದೆ.