ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಿದೆ.
ಸೆಪ್ಟೆಂಬರ್‌ನಲ್ಲಿ ನಡೆಸಬೇಕಿದ್ದ ಪರೀಕ್ಷೆಯನ್ನು ಅಕ್ಟೋಬರ್‌ನಲ್ಲಿ ನಡೆಸಲು ನಿರ್ಧರಿಸಿದೆ.
ರಾಜ್ಯ ಕಾನೂನು ಸಚಿವರೊಂದಿಗೆ ಸಮಾಲೋಚಿಸಿದ ನಂತರ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅಂತಿಮ ವರ್ಷದ ಪರೀಕ್ಷೆಗಳ ಹೊರತಾಗಿ, ಅಕ್ಟೋಬರ್ 5 ರಂದು ನಿಗದಿಯಾಗಿದ್ದ ಇಂಟರ್ಮೀಡಿಯೇಟ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ಅಂತಿಮ ವರ್ಷದ ಪರೀಕ್ಷೆಗಳನ್ನು ಅಕ್ಟೋಬರ್‌ನಲ್ಲಿ ಆನ್‌ಲೈನ್‌ನಲ್ಲಿ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿ: ಮೂರೇ ವಾರದಲ್ಲಿ ಬ್ರಿಟನ್ ಜನರಿಗೆ ಸಿಗಲಿದೆ ಕರೊನಾ ಲಸಿಕೆ; ತುರ್ತು ಬಳಕೆಗೆ ಕಾಯ್ದೆ ತಿದ್ದುಪಡಿ; ಭಾರತಕ್ಕೂ ಇದೆ ಅವಕಾಶ
COVID-19 ರೋಗವನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಸೆಮಿಸ್ಟರ್‌ಗಳ ಪರೀಕ್ಷಾ ಅಧಿಸೂಚನೆಯನ್ನು ಹಿಂಪಡೆಯುವಂತೆ ಮಾಜಿ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್‌ಎಲ್‌ಯು) ಒತ್ತಾಯಿಸಿದ ಕೆಲವೇ ದಿನಗಳ ನಂತರ ನಿರ್ಧಾರಕ್ಕೆ ಬರಲಾಗಿದೆ.
ವಿಶ್ವವಿದ್ಯಾಲಯದ ಆನ್‌ಲೈನ್ ತರಗತಿಗಳು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿವೆ. ಲಾಕ್‌ಡೌನ್‌ನಿಂದಾಗಿ ಏಪ್ರಿಲ್ ದಿಂದ ಕಳೆದ ಸಮಯವನ್ನು ಸರಿದೂಗಿಸಲು ಆನ್‌ಲೈನ್ ತರಗತಿಗಳನ್ನು ನಡೆಸಲಾಗುವುದು. ಇದಲ್ಲದೆ, ತರಗತಿಗಳು ನಿಯಮಿತವಾಗಿ ಪುನರಾರಂಭಗೊಂಡ ನಂತರ ವಿವಿಯ ಸೆಮಿಸ್ಟರ್ ಮತ್ತು ಇಂಟರ್ಮೀಡಿಯೇಟ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಮಾರ್ಚ್ ನಲ್ಲಿ ನಡೆದ ಇಂಟರ್ನಲ್ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಯ ಆಧಾರದ ಮೇಲೆ ಅವರಿಗೆ ತಾತ್ಕಾಲಿಕವಾಗಿ ಮುಂದಿನ ಸೆಮಿಸ್ಟರ್‌ಗೆ ಹೋಗಲು ಅವಕಾಶ ನೀಡಲಾಗುವುದು. ಆದಾಗ್ಯೂ, ವಿವಿ ಪರೀಕ್ಷೆ ನಡೆಸಲು ನಿರ್ಧರಿಸಿದಾಗ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.