ನ್ಯೂಸ್

ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

ರಾಮನಗರ: ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಅಪಘಾತಕ್ಕೀಡಾಗಿದೆ.

ಶುಕ್ರವಾರ ಸಂಜೆ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ನೈಸ್ ರಸ್ತೆಯ ಬಳಿ ಕೆಎಸ್​ಆರ್​ಟಿಸಿ ಬಸ್​ ಮತ್ತು ಸಚಿವರ ಕಾರಿನ ನಡುವೆ ಅಪಘಾತವಾಗಿದೆ.

ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ ಸಚಿವರು ಮತ್ತು ಸಚಿವರ ಕಾರಿನ ಚಾಲಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.