ನ್ಯೂಸ್

ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸಾವು, 7 ಮಂದಿ ಸ್ಥಿತಿ ಗಂಭೀರ.. yellapur accident

ಶಿರಸಿ: ( yellapur accident )  ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು,  7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಯಲ್ಲಾಪುರದ ಮಾವಳ್ಳಿ ಕ್ರಾಸ್​​ ಬಳಿ ಶುಕ್ರವಾದ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಮೃತರನ್ನು ನಿಲವೂ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಎಂದು ಗುರುತಿಸಲಾಗಿದೆ. ಮತ್ತೊಬ್ಬ 45 ವರ್ಷದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.  ಗಾಯಾಳುಗಳನ್ನು  ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ಹಾಗೂ ನಿರ್ವಾಹಕ‌ ದುರ್ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿ ಚಾಲಕ ಇಂಡಿಕೇಟರ್ ಹಾಕದೆ ಕತ್ತಲೆಯಲ್ಲಿ ಲಾರಿ ನಿಲ್ಲಿಸಿದ್ದಾನೆ ಎಂದು ಹೇಳಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

KA 19 F 3470 ಸಂಖ್ಯೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಬಸ್ ಬಾಗಲಕೋಟೆಯಿಂದ ಮಂಗಳೂರಿಗೆ ತೆರಳುತ್ತಿತ್ತು. ಈವೇಳೆ ನಿಂತಿದ್ದ ಲಾರಿಗೆ ಬಸ್‌ ಗುದ್ದಿದೆ.  ಡಿಕ್ಕಿಯಾದ ರಭಸಕ್ಕೆ ಬಸ್​ನ ಬಂದು ಬಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಈ ಭೀಕರ ಅಪಘಾತಕ್ಕೆ ಕಾರಣ:

ಈ ಸ್ಥಳ ಯಲ್ಲಾಪುರ- ಅಂಕೋಲಾ ರಸ್ತೆ ದಟ್ಟ ಕಾಡು ಹಾಗೂ ಘಟ್ಟ ಪ್ರದೇಶದಿಂದ ಕೂಡಿದ್ದು, ದುರ್ಗಮ ರಸ್ತೆಯಾಗಿದೆ.

ರಸ್ತೆಯಂಚಿನಲ್ಲಿ ನಿಲ್ಲಿಸಿದ್ದ ಲಾರಿ ಇಂಡಿಕೇಟರ್ ಹಾಕಿರಲಿಲ್ಲ.

ಬಸ್ ಓವರಟೇಕ್ ಮಾಡುವ ಸಂದರ್ಭದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.