ನ್ಯೂಸ್

ಸ್ಟೇರಿಂಗ್ ಲಾಕ್; ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್​​ಆರ್​ಟಿಸಿ ಬಸ್

ಮಂಡ್ಯ: ಸ್ಟೇರಿಂಗ್ ಲಾಕ್ ಆಗಿ ಕೆಎಸ್​​ಆರ್​ಟಿಸಿ ಬಸ್ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಗೇಟ್ ಬಳಿ ನಡೆದಿದೆ. ಬಸ್​ನಲ್ಲಿ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರು ಇದ್ದರು.

ಕೆಎಸ್​ಆರ್​ಟಿಸಿ ಬಸ್ ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕನಗನಮರಡಿ ಗೇಟ್ ಬಳಿ ಬಸ್​ನ ಸ್ಟೇರಿಂಗ್ ಲಾಕ್​ ಆಗಿದೆ. ಈ ವೇಳೆ ಬಸ್ ಚಾಲಕನ ನಿಯಂತ್ರಣದಿಂದ ತಪ್ಪುತ್ತಿದ್ದಂತೆ ಹತ್ತಿರದ ಕಬ್ಬಿನ ಗದ್ದೆಗೆ ನುಗ್ಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ; ಗ್ರಾಹಕರಿಗೆ ತಟ್ಟಿದ ಹೋಟೆಲ್ ಊಟ ತಿಂಡಿಗಳ ದರ ಹೆಚ್ಚಳ ಬಿಸಿ

ಕಬ್ಬಿನ ಗದ್ದೆಯ ಪಕ್ಕದಲ್ಲಿ ನಿಲ್ಲಿಸಿದ್ದ ಎತ್ತಿನಗಾಡಿಯ ಮೇಲೆ ಬಸ್‌ ಹರಿದಿದೆ. ಖಾಲಿ ನಿಲ್ಲಿಸಿದ್ದ ಎತ್ತಿನ ಗಾಡಿ ಸಂಪೂರ್ಣವಾಗಿ ಎರಡು ತುಂಡುಗಳಾಗಿವೆ. ಗಾಲಿಯ ಮಧ್ಯದಲ್ಲಿ ಎತ್ತಿನಗಾಡಿ ಸಿಲುಕಿಕೊಂಡಿದ್ದು, ಅದರ ಎರಡೂ ಬದಿಯ ಟೈರ್‌ಗಳು ಕಳಚಿಬಿದ್ದಿವೆ.

ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ಕಬ್ಬಿನ ಗದ್ದೆಗೆ ನುಗ್ಗಿದೆ. ಒಂದು ವೇಳೆ ದುರಾದೃಷ್ಟವಶಾತ್ ಬಸ್‌ ಇನ್ನೊಂದು ಬದಿಯಲ್ಲಿನ ದೊಡ್ಡ ಕಾಲುವೆಗೆ ಬಿದ್ದಿದ್ದರೆ ಸಾವು ನೋವು ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇದನ್ನೂ ಓದಿ: ಭೀಕರ ಅಪಘಾತ; ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು