ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿವೆ. ಇದೀಗ ಕೆಎಸ್ಆರ್ಟಿಸಿ ಬಸ್ಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಪ್ರಯಾಣಿಕರು ಪರದಾಡ ನಡೆಸುತ್ತಿರುವ ಪರಿಸ್ಥಿತಿ ಮೆಜೆಸ್ಟಿಕ್ ಬಸ್ ನಿಲ್ದಾಣ ಸೇರಿದಂತೆ ರಾಜ್ಯ ವಿವಿಧ ಬಸ್ ನಿಲ್ದಾಣಗಳಲ್ಲಿ ಕಂಡು ಬಂದಿದೆ.
ಚುನಾವಣಾ ಕರ್ತವ್ಯಕ್ಕೆ 3500 ಕೆಎಸ್ಆರ್ಟಿಸಿ ಬಸ್ಗಳು ತೆರಳಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ. ಮೆಜೆಸ್ಟಿಕ್ಗೆ ಬರುತ್ತಿರುವ ಸೀಮಿತ ಬಸ್ಗಳು ಕೂಡ ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ದೂರ ಊರಿಗೂ ನಿಂತುಕೊಂಡೇ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಚುನಾವಣೆಯ ಕಾರಣದಿಂದ ಕೆಲ ಪ್ರಯಾಣಿಕರು ತಮ್ಮ ಸೀಟುಗಳನ್ನು ಮುಂಗಡವಾಗಿ ಕಾಯ್ದಿರಿಸಿಕೊಂಡಿದ್ದಾರೆ. ಆದರೆ ಬಹುತೇಕ ಸಾಮಾನ್ಯ ಪ್ರಯಾಣಿಕರು ಬಸ್ಸಿಲ್ಲದೆ, ಅತ್ತ ಮತ ಚಲಾವಣೆಗೆ ತೆರಳಲು ಸಮಸ್ಯೆ ಅನುಭವಿಸುವಂತಾಗಿದೆ.
ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಭಾಗಗಳಿಗೆ ತೆರಳುವ ಬಸ್ಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗುತ್ತಿದು, ಸೀಮಿತ ಬಸ್ಗಳಲ್ಲಿ ಪ್ರಯಾಣಿಕರು ನಿಂತುಕೊಂಡು ಹೋಗಬೇಕಾಗದ ಪರಿಸ್ಥಿತಿ ಉಂಟಾಗಿದೆ.