ನ್ಯೂಸ್

ಹೂವಿನ ಹಾರ ಹಾಕಿಕೊಂಡೆ ನೇಣಿಗೆ ಶರಣಾದ ಕೆಎಸ್ಆರ್ಟಿಸಿ ಚಾಲಕ

ಶಿವಮೊಗ್ಗ: ಕೊರಳಿಗೆ ಹೂವಿನ ಹಾರ ಹಾಕಿಕೊಂಡೆ ಕೆಎಸ್ಆರ್ಟಿಸಿ ನೌಕರನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಗಂಗಾಧರ್ (46) ಎಂದು ಗುರುತಿಸಲಾಗಿದ್ದು, ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಹೊಸಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ನೇಣಿಗೆ ಕೊರಳೊಡ್ಡುವ ಮುನ್ನ ತಾವೇ ಹೂವಿನ ಹಾರ ಹಾಕಿಕೊಂಡಿದ್ದು, ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.