ನ್ಯೂಸ್

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಉಗ್ರ ಶಾರಿಖ್ ಬೆಂಗಳೂರಿಗೆ ಸ್ಥಳಾಂತರ

ಬೆಂಗಳೂರು: ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ ಶಾರಿಖ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ.

ಬಾಂಬ್ ಸ್ಫೋಟದ ವೇಳೆ ಶಾರಿಖ್‌ಗೆ ಸುಟ್ಟ ಗಾಯಗಳಾಗಿದ್ದು, ಮಂಗಳೂರಿನ ಪಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಪೊಲೀಸ್​ ಬಂದೋಬಸ್ತ್​ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಇಂದು(ಶನಿವಾರ) ಸ್ಥಳಾಂತರಿಸಲಾಗುತ್ತಿದೆ.