ನ್ಯೂಸ್

ಪ್ರಸನ್ನಾನಂದಪುರಿ ಶ್ರೀಗಳಿಂದ ಕುಮಾರಸ್ವಾಮಿಗೆ ಸನ್ಮಾನ...

ಬೆಂಗಳೂರು: ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಮುದಾಯದ ಪರವಾಗಿ ನಿಂತು ನಿರ್ಣಾಯಕ ಪಾತ್ರ ವಹಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಾಲ್ಮೀಕಿ ಗುರುಪೀಠದ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅಭಿನಂದಿಸಿದರು.

ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಕುಮಾರಸ್ವಾಮಿ ನಡೆಸಿದ ಹೋರಾಟಕ್ಕೆ ಬೆಂಬಲ ನೀಡಿದ್ದು ಮಾತ್ರವಲ್ಲದೆ, ಮುಖ್ಯಮಂತ್ರಿ ಆಗಿದ್ದಾಗ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಮಾಡಿ ಮೀಸಲು ಹೆಚ್ಚಳಕ್ಕೆ ಮೂಲ ಕಾರಣವಾಗಿದ್ದಾರೆ ಎಂದು ಹೇಳಿದರು.