ಬೆಂಗಳೂರು: ಬಿಹಾರದ ನಿತೀಶ್ ಕುಮಾರ್ ಅವರಂತೆ ನಿಮ್ಮನ್ನೂ ದೀರ್ಘಾವಧಿ ಮುಖ್ಯಮಂತ್ರಿಯನ್ನಾಗಿ ಮಾಡುವುದು ನನ್ನ ಜವಾಬ್ದಾರಿ ಬಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕುಮಾರಸ್ವಾಮಿಯನ್ನು ಆಹ್ವಾನಿಸಿದ್ದರು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೆನಪಿಸಿದರು.
ಅರಮನೆ ಮೈದಾನದಲ್ಲಿ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿಶೇಷ ಪ್ರೀತಿ, ವಿಶ್ವಾಸ ಇದೆ. 2018ರಲ್ಲಿಯೇ ದೆಹಲಿಯಲ್ಲಿ ಒಮ್ಮೆ, ಈ ಕೂಡಲೇ ರಾಜೀನಾಮೆ ನೀಡು. ನಾಳೆಯೇ ಹೊಸದಾಗಿ ಪ್ರಮಾಣ ಸ್ವೀಕಾರ ಮಾಡು. ಬಿಹಾರದ ನಿತೀಶ್ ಕುಮಾರ್ ಅವರಂತೆ ನಿಮ್ಮನ್ನೂ ದೀರ್ಘಾವಧಿ ಮುಖ್ಯಮಂತ್ರಿಯನ್ನಾಗಿ ಮಾಡುವುದು ನನ್ನ ಜವಾಬ್ದಾರಿ ಎಂದು ಕುಮಾರಸ್ವಾಮಿಗೆ ಹೇಳಿದ್ದರು. ಆದರೆ ಕುಮಾರಸ್ವಾಮಿ ನನ್ನ ಆರೋಗ್ಯ ನೋಡಿಕೊಂಡು ಮೋದಿ ಅವರ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದರು ಎಂದು ದೇವೇಗೌಡ ಹೇಳಿದರು.