ನ್ಯೂಸ್

ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನಲೆ, ಹೆಚ್​ಡಿಕೆ ವಿಶೇಷ ಪೂಜೆ..!

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನೇನೂ ಕೆಲವೇ ಗಂಟೆಗಳು ಉಳಿದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಠದ ಆವರಣದಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಡಾ.ನಿರ್ಮಲಾನಂದ ಶ್ರೀಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಶೇಷ ಮಂಗಳಾರತಿ ಮಾಡಿಸಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.


ಪೂಜೆಯ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಈಗ ಆರಂಭಿಕ ಮುನ್ನಡೆಯಲ್ಲಿದ್ದೇವೆ. ಕೊನೆ ಹಂತದವರೆಗೆ ಇದು ಹೀಗೆಯೇ ಇರಲಿದೆ. ದೇಶದಲ್ಲಿ ಎನ್‍ಡಿಎ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸವಿದೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಸೀಟ್‍ಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.