ಕುಷ್ಟಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕೆಂದು ತಹಸೀಲ್ದಾರ್ ಅಶೋಕ ಶಿಗ್ಗಾವಿ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರ ಸಭೆಯಲ್ಲಿ ಮಾತನಾಡಿದರು.
2025ರ ನ.1ಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆದಿದ್ದು, ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಪುನಃ ನಮೂನೆ 19ರಲ್ಲಿ ಅರ್ಜಿ ಸಲ್ಲಿಸಬೇಕು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನ.6 ಕೊನೆ ದಿನವಾಗಿದ್ದು, ಪರಿಷ್ಕರಣೆಯ ಭಾಗವಾಗಿ ನ.25ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿ ಆಕ್ಷೇಪಣೆಗೆ ಆಹ್ವಾನಿಸಲಾಗುತ್ತದೆ. ಅಂತಿಮ ಪಟ್ಟಿಯನ್ನು ಡಿ.30ಕ್ಕೆ ಪ್ರಕಟಿಸಲಾಗುವುದು ಎಂದರು.
ಗ್ರೇಡ್2 ತಹಸೀಲ್ದಾರ್ ರಜನಿಕಾಂತ, ಶಿರಸ್ತೇದಾರ್ ಮಂಜುನಾಥ, ಚುನಾವಣಾ ವಿಷಯ ನಿರ್ವಾಹಕ ಅಜಿತ್ ಜೋಶಿ, ಐಟಿಐ ಕಾಲೇಜಿನ ಪ್ರಾಚಾರ್ಯರಾದ ರಮೇಶ ಕುಮಾರ ಬೋಗಂ, ಶ್ರೀಕಾಂತ ಸರಗಣಾಚಾರಿ ಇತರರಿದ್ದರು.