ಸಿಎಂ ಸಿದ್ದರಾಮಯ್ಯ 
ನ್ಯೂಸ್

ಕುವೈತ್ ಅಗ್ನಿ ದುರಂತ, ಮೃತ ಕನ್ನಡಿಗನ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ: ಸಿಎಂ

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ಸರಸಂಬ ಗ್ರಾಮದ ವಿಜಯಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ರಾಜ್ಯ ಸರ್ಕಾರ ಐದು ಲಕ್ಷ ರೂ. ಪರಿಹಾರ ಪ್ರಕಟಿಸಿದೆ.

ರಾಜ್ಯದ ಅನಿವಾಸಿ ಭಾರತೀಯ ಸಮಿತಿ ಸಲ್ಲಿಸಿದ ಕೋರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ. ಮಂಜೂರು ಮಾಡಲು ಒಪ್ಪಿದ್ದಾರೆ.

ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ವಿಜಯಕುಮಾರ್ ಅವರ ಕುಟುಂಬದಲ್ಲಿ ಅಣ್ಣ, ತಮ್ಮಂದಿರು ಸೇರಿ ಎಂಟು ಜನ ಅವಲಂಬಿತರಿದ್ದಾರೆ.

ಅಗ್ನಿ ದುರಂತರದಲ್ಲಿ ಮೃತರ ಕುಟುಂಬಗಳಿಗೆ ಕೇರಳ ಸರ್ಕಾರ ಐದು ಲಕ್ಷ ರೂ. ಪರಿಹಾರ ೋಷಿಸಿರುವಂತೆಯೇ ರಾಜ್ಯ ಸರ್ಕಾರ ನೆರವು ನೀಡಬೇಕು ಎಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿ ಕೃಷ್ಣ ಮನವಿ ಮಾಡಿದ್ದರು.