ರಾಮನಗರ: ಸರ್ಕಾರದ ನಿಯಮಗಳನ್ನು ಮೀರಿಯೇ ಕಪಾಲ ಬೆಟ್ಟ ಅಭಿವೃದ್ಧಿ ಟ್ರಸ್ಟ್ಗೆ ಗೋಮಾಳ ಜಮೀನು ಮಂಜೂರು ಮಾಡಿಕೊಡಲಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಕನಕಪುರ ತಾಲೂಕಿನ ಹಾರೋಬೆಲೆ ಬಳಿ ಯೇಸು ಪ್ರತಿಮೆ ನಿರ್ವಣಕ್ಕೆ ಸಂಬಂಧಿಸಿದ ವರದಿಯನ್ನು ಜಿಲ್ಲಾಡಳಿತ 4-5 ದಿನಗಳ ಹಿಂದೆ ಸರ್ಕಾರಕ್ಕೆ ಸಲ್ಲಿಸಿದ್ದು, ಬಿಎಂಆರ್ಡಿಎ ನಿಯಮಗಳನ್ನು ಮೀರಿ ಭೂ ಪರಿವರ್ತನೆ ಮಾಡಿಕೊಡಲಾಗಿದೆ.
ಟ್ರಸ್ಟ್ಗೆ ಜಮೀನು ಹಸ್ತಾಂತರವಾಗುವ ಮುನ್ನವೇ ಕಾಮಗಾರಿ ಕೈಗೊಂಡು, ರಸ್ತೆ ನಿರ್ವಣ, ಕೊಳವೆ ಬಾವಿಗಳನ್ನು ಕೊರೆಯಲಾಗಿದೆ, ವಿದ್ಯುತ್ ಸಂಪರ್ಕವನ್ನೂ ಪಡೆಯಲಾಗಿದೆ ಎಂಬುದನ್ನು ವರದಿಯಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ವರದಿ ಸಲ್ಲಿಸಿರುವುದನ್ನು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದು, ಅಂಶಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.