ನ್ಯೂಸ್

ಉತ್ತರಾಖಂಡದ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ಭೂಕುಸಿತ; 12 ಕಾರ್ಮಿಕರಿಗೆ ಗಾಯ| uttarakhand

ಡೆಹ್ರಾಡೂನ್; ಉತ್ತರಾಖಂಡದ ಚಮೋಲಿ ಜಿಲ್ಲೆಯ ಹೆಲಾಂಗ್ ಬಳಿಯ ಟಿಎಚ್‌ಡಿಸಿಯ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ಇಂದು (ಆ.02) ಭೂಕುಸಿತ ಸಂಭವಿಸಿ ಹನ್ನೆರಡು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಪಿಪಲ್ಕೋಟಿಯ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯೋಜನಾ ಸ್ಥಳದಲ್ಲಿ ಸದ್ಯಕ್ಕೆ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಂದೀಪ್ ತಿವಾರಿ ತಿಳಿಸಿದ್ದಾರೆ.

ಭೂಕುಸಿತ ಸಂಭವಿಸಿದಾಗ ಯೋಜನಾ ಸ್ಥಳದಲ್ಲಿ ಸುಮಾರು 300 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

(ಏಜೆನ್ಸೀಸ್)

ಅಪಘಾತದ ನಂತರ, ಟಿಎಚ್‌ಡಿಸಿ ಮತ್ತು ಎಚ್‌ಸಿಸಿ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಮುಂದುವರೆಸಿದೆ.

ಸ್ಥಳೀಯ ಆಡಳಿತ ಮತ್ತು ತಜ್ಞರ ಪ್ರಕಾರ, ಚಮೋಲಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಘಟನೆಗಳು ಹೆಚ್ಚುತ್ತಿವೆ. ಮಳೆಯಿಂದಾಗಿ ಮಣ್ಣು ಮತ್ತು ಬಂಡೆಗಳು ದುರ್ಬಲಗೊಂಡಿರುವುದರಿಂದ ಇಂತಹ ಅಪಘಾತಗಳು ಸಂಭವಿಸುತ್ತಿವೆ. ಹೆಲಾಂಗ್‌ನಲ್ಲಿ ಭಾರೀ ಮಳೆಯಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.