ಶಿಮ್ಲಾ : ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಒಂದು ಟ್ರಕ್ ಮತ್ತು ಒಂದು ರಾಜ್ಯ ಸಾರಿಗೆ ಬಸ್ ಮಣ್ಣಿನ ಕೆಳಗೆ ಸಿಕ್ಕಿಹಾಕಿಕೊಂಡಿವೆ ಎನ್ನಲಾಗಿದೆ. ಈ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 40 ಜನರು ಅಪಾಯದಲ್ಲಿದ್ದು, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ತಂಡದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೋ-ಶಿಮ್ಲಾ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಟ್ರಕ್, ಎಚ್ಆರ್ಟಿಸಿ ಬಸ್ ಮತ್ತು ಇತರ ವಾಹನಗಳು ಅವಶೇಷಗಳ ಅಡಿಯಲ್ಲಿವೆ. ಅನೇಕ ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಐಟಿಬಿಪಿ, ಪೊಲೀಸ್, ಹೋಂಗಾರ್ಡ್ಗಳು ಮತ್ತು ರಕ್ಷಣಾ ತಂಡಗಳನ್ನು ಘಟನೆಯ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಕಿನ್ನೌರ್ ಎಸ್ಪಿ ಸಾಜು ರಾಮ ರಾಣ ಹೇಳಿದ್ದಾರೆ. (ಏಜೆನ್ಸೀಸ್)