ನ್ಯೂಸ್

ಕಾನೂನು ಅರಿವು ನೆರವು ಕಾರ್ಯಕ್ರಮ ಮಾ. 14ರಂದು

Haveri - Kariyappa Aralikatti

ಹಾವೇರಿ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆರೋಗ ವತಿಯಿಂದ ವಿಶ್ವ ಗ್ರಾಹಕರ ದಿನಾಚರಣೆ ನಿಮಿತ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಮಾ. 14ರಂದು ಬೆಳಗ್ಗೆ 10-.30ಕ್ಕೆ ನಗರದ ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಲಿದೆ.

ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಉದ್ಘಾಟಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶ್ವರಪ್ಪ ಬಿ.ಎಸ್​. ಅಧ್ಯಕ್ಷತೆ ವಹಿಸಲಿದ್ದಾರೆ.

ನ್ಯಾಯಾಧೀಶ ಬಿ.ಆರ್​. ಮುತಾಲಿಕದೇಸಾಯಿ, ಉಮಾದೇವಿ ಹಿರೇಮಠ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್​.ಎಚ್​. ಜತ್ತಿ, ಕಾರ್ಯದಶಿರ್ ಪಿ.ಎಸ್​. ಹೆಬ್ಬಾಳ ಮತ್ತಿತರರು ಅತಿಥಿಗಳಾಗಿ ಪಾಲ್ಗೊಳ್ಳುವರು. ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್​.ಎನ್​. ಡಿಳ್ಳೆಪ್ಪನವರ, ಗ್ರಾಹಕರ ಹಕ್ಕು ಕಾಯ್ದೆ2019ರ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.