ಬೆಂಗಳೂರು: ಖಾಸಗಿ ಕಾಲೇಜು ಕಾನೂನು ವಿದ್ಯಾರ್ಥಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡಿ.ಗ್ರೂಪ್ ಲೇಔಟ್ ಸಮೀಪದ ಶ್ರೀಗಂಧ ಕಾವಲು ಬಡಾವಣೆಯಲ್ಲಿ ಪೇಯಿಂಗ್ ಗೆಸ್ಟ್(ಪಿಜಿ)ನಲ್ಲಿ ನೆಲೆಸಿದ್ದ ಆರ‌್ಯ ಕುಮಾರ್ ನಡ್ಡಾ (23) ಮೃತ ವಿದ್ಯಾರ್ಥಿ. ಹಿಮಾಚಲ ಪ್ರದೇಶ ಮೂಲದ ಆರ‌್ಯ ಕುಮಾರ್, ಓದಿನ ಸಲುವಾಗಿ ನಗರಕ್ಕೆ ಬಂದು ಪೇಯಿಂಗ್ ಗೆಸ್ಟ್‌ನಲ್ಲಿ ನೆಲೆಸಿದ್ದ. ಸಮೀಪದ ಖಾಸಗಿ ಕಾನೂನು ಕಾಲೇಜಿನಲ್ಲಿ 3ನೇ ವರ್ಷದ ಕಾನೂನು ಪದವಿಯಲ್ಲಿ ಓದುತ್ತಿದ್ದ.
ಭಾನುವಾರ ಕೊಠಡಿಯಲ್ಲಿ ಯಾರು ಇಲ್ಲದಿದ್ದಾಗ ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ನೇಹಿತರು ಪಿಜಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನೆಲೆಸಿರುವ ಮೃತನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ನಗರಕ್ಕೆ ಬಂದ ಮೇಲೆ ಮರಣೋತ್ತರ ಪರೀಕ್ಷೆ ಒಳಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ‌್ಯ ಕುಮಾರ್ (ಮೈಗ್ರೇನ್) ತಲೆನೋವಿನಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಸದ್ಯಕ್ಕೆ ಯಾವುದೇ ಮರಣಪತ್ರ ಸಿಕ್ಕಿಲ್ಲ. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.