ನ್ಯೂಸ್

ಫೇಸ್‌ಬುಕ್‌ನಲ್ಲಿ ಕಮೆಂಟ್ ಹಾಕಿದ್ದಕ್ಕೆ ಶಾಸಕರು, ಪೊಲೀಸರಿಂದ ಕಿರುಕುಳ ಅನುಭವಿಸಿದ ಈ ಯುವಕ ಕೊನೆಗೆ ಮಾಡಿದ್ದೇನು...

ಗುಂಡ್ಲುಪೇಟೆ: ಶಾಸಕರ ವಿರುದ್ಧ ಫೇಸ್‌ಬುಕ್‌ನಲ್ಲಿ ಕಮೆಂಟ್ ಹಾಕಿದ್ದಕ್ಕೆ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ತನ್ನಲ್ಲಿದ್ದ ಹಣ ಕಸಿದು ದೈಹಿಕವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಯುವಕನೊಬ್ಬ ಫೇಸ್‌ಬುಕ್ ಲೈವ್‌ನಲ್ಲಿ ಆರೋಪಿಸಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಾಲೂಕಿನ ಕಂದೇಗಾಲ ಗ್ರಾಮದ ಆನಂದ ಆಲಿಯಾಸ್ ಶಿವಮೂರ್ತಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳದಲ್ಲಿ ಕರೊನಾ ಹೆಚ್ಚಾಗಿರುವುದರಿಂದ ಮೂಲೆಹೊಳೆ ಚೆಕ್ ಪೋಸ್ಟ್ ಮುಚ್ಚಬೇಕು ಎಂದು ಬಿಜೆಪಿ ಹಾಗೂ ರೈತ ಮುಖಂಡರು ಇತ್ತೀಚೆಗೆ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸರ್ಕಾರವನ್ನು ಒತ್ತಾಯಿಸಿದ್ದರು. ಬಳಿಕ ಸೆಕ್ಷನ್ 144 ಉಲ್ಲಂಘಿಸಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಲಾಗಿದೆ ಎಂದು ರೈತ ಮುಖಂಡ ಕಡಬೂರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಶಾಸಕರ ಪರ ಹಾಗೂ ವಿರುದ್ಧ ಫೇಸ್‌ಬುಕ್‌ನಲ್ಲಿ ಸಮರ ಪ್ರಾರಂಭವಾಗಿತ್ತು.

ಮಧ್ಯರಾತ್ರಿಯಲ್ಲಿ ಬೇರೆಯವರ ಮನೆಗೆ ಹೋಗುತ್ತಾರೆ ಎಂದು ಕಡಬೂರು ಮಂಜುನಾಥ್ ಆಪ್ತ ಆನಂದ್ ಕಮೆಂಟ್ ಹಾಕಿದ್ದಾನೆ. ಇದು ಶಾಸಕ ನಿರಂಜನಕುಮಾರ್ ಅವರನ್ನು ಕುರಿತ ಹೇಳಿಕೆ ಎಂದು ಪಟ್ಟಣ ನಿವಾಸಿ ಆನಂದ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬುಧವಾರ ರಾತ್ರಿ ಆನಂದನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು.

ಶಾಸಕರ ವಿರುದ್ಧ ನಡೆದುಕೊಂಡರೆ ರೌಡಿಶೀಟ್ ತೆರೆಯುವುದಾಗಿ ಸಬ್ ಇನ್ಸ್‌ಪೆಕ್ಟರ್ ಲತೇಶ್ ಕುಮಾರ್ ಬೆದರಿಕೆ ಹಾಕಿದ್ದಾರೆ. ಅಲ್ಲದೆ ತನ್ನ ಬಳಿಯಿದ್ದ 1.8 ಲಕ್ಷ ರೂ. ನಗದನ್ನು ಕಸಿದುಕೊಂಡಿದ್ದಾರೆ ಎಂದು ಫೇಸ್‌ಬುಕ್ ಲೈವ್‌ನಲ್ಲಿ ಆರೋಪಿಸಿದ್ದಾನೆ.

ಚುನಾವಣೆಯಲ್ಲಿ ನಿರಂಜನಕುಮಾರ್ ಗೆಲುವಿಗೆ ತಾನೂ ಶ್ರಮಿಸಿದ್ದರೂ ಅದನ್ನೆಲ್ಲ ಮರೆತು ತನ್ನ ವಿರುದ್ಧ ದೂರು ಕೊಡಿಸಿ ದೌರ್ಜನ್ಯ ಎಸಗಿದ್ದಾರೆ. ವಿಚಾರಣೆ ನೆಪದಲ್ಲಿ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದು, ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ಮನನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಫೋನ್ ಸ್ವಿಚಾಫ್ ಮಾಡಿದ್ದಾನೆ.

ಈ ವಿಚಾರ ತಿಳಿದ ಸ್ನೇಹಿತರು ಹಾಗೂ ಮನೆಯವರು ಸುಮಾರು ಎರಡು ಗಂಟೆಗಳ ಕಾಲ ಹುಡುಕಿದಾಗ ಸಮೀಪದ ಬೆಟ್ಟಹಳ್ಳಿ ಗ್ರಾಮದ ಸಮೀಪ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ. ಕೂಡಲೇ ಪಟ್ಟಣದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯಲಾಯಿತು.

ಇದಕ್ಕೂ ಮುನ್ನ ನೂರಾರು ಸಾರ್ವಜನಿಕರು ಆಸ್ಪತ್ರೆ ಬಳಿ ಜಮಾಯಿಸಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ತಮ್ಮ ವಿರೋಧಿಗಳನ್ನು ಹಣಿಯುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಮಂಡಲಾಧ್ಯಕ್ಷ ಎಲ್.ಸುರೇಶ್ ಹಾಗೂ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಆನಂದನ ಪಾಲಕರು, ಎಸ್‌ಪಿ ಹಾಗೂ ದಕ್ಷಿಣ ವಲಯ ಐಜಿಯವರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಚೆಕ್ ಪೋಸ್ಟ್ ಬಂದ್ ಮಾಡುವಂತೆ ತಾನು ಹಾಗೂ ಉಸ್ತುವಾರಿ ಸಚಿವರು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಈ ನಡುವೆ ಜಿಲ್ಲೆಯಲ್ಲಿ ಕರೊನಾಗೆ ಬಲಿ ಎಂದು ಫೇಸ್‌ಬುಕ್‌ನಲ್ಲಿ ಸುಳ್ಳು ಸುದ್ದಿ ಹಾಕಿದ್ದ ಮೂವರನ್ನು ಪೊಲೀಸರು ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ವಿನಾಕಾರಣ ನನ್ನ ಹೆಸರನ್ನು ಬಳಸಿಕೊಳ್ಳಲಾಗಿದೆ. ನಿರಂಜನಕುಮಾರ್ ಶಾಸಕhttps://www.vijayavani.net/a-lesson-on-youtube-for-students/