ನ್ಯೂಸ್

BJP ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಲಕ್ಷ್ಮಣ ಸವದಿ

ಬೆಂಗಳೂರು: ಲಕ್ಷ್ಮಣ ಸವದಿ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಲಕ್ಷ್ಮಣ ಸವದಿ ಅವರು ರಾಜೀನಾಮೆ ಪತ್ರವನ್ನು ಆಪ್ತ ಸಹಾಯಕನ ಮೂಲಕವಾಗಿ ಬಿಜೆಪಿ ಕಚೇರಿಗೆ ತಲುಪಿಸಿದ್ದಾರೆ. ಸವದಿ ಆಪ್ತ ಸಹಾಯಕ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜಧಾನಿಯಲ್ಲಿ ಬಂಡಾಯ ನಾಯಕರ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿಯಿಂದ ಟಿಕೆಟ್‌ ವಂಚಿತರಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಸೇರ್ಪಡೆ ಖಚಿತವಾಗಿದ್ದು, ಪಕ್ಷದ ನಾಯಕರಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನಿಟ್ಟಿದ್ದಾರೆ ಎನ್ನಾಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ಸವದಿ ಕಾಂಗ್ರೆಸ್‌ ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.