ಬೆಂಗಳೂರು:
ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ವಹಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನಲ್ಲಿ ಹುಬ್ಬಳ್ಳಿ
ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ 122 ಖಾಸಗಿ ಬಡಾವಣೆಗಳನ್ನು ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ ಎಂದರು.
ಅನಧಿಕೃತ ಬಡಾವಣೆಗಳ ಬಗ್ಗೆ ಪ್ರಾಧಿಕಾರದ ಗಮನಕ್ಕೆ ಬಂದ ನಂತರ ಆಯಾ ಜಮೀನಿನ ಮಾಲೀಕರುಗಳಿಗೆ ತಹಶೀಲ್ದಾರ್ ಮೂಲಕ ನೋಟೀಸು ಜಾರಿ ಮಾಡಲಾಗಿರುತ್ತದೆ. ಅದರಂತೆ ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು.