ಆಂಧ್ರಪ್ರದೇಶ: ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ಅಭಿನಯದ ಬಹುನಿರೀಕ್ಷಿತ 'ಲಿಯೋ' ಸಿನಿಮಾ ಇದೇ ಅಕ್ಟೋಬರ್ 19 ರಂದು ಬಿಡುಗಡೆಗೆ ಸಜ್ಜಾಗಿದ್ದು, ಈ ಬೆನ್ನಲ್ಲೇ ನಿರ್ದೇಶಕ ಲೋಕೇಶ್ ಕನಕರಾಜ್ ತಮ್ಮ ತಂಡದೊಂದಿಗೆ ತಿರಮಲ ದರ್ಶನ ಪಡೆದಿದ್ದಾರೆ.
ಚಿತ್ರವು ಜಾಗತಿಕವಾಗಿ ಬಹುತೇಕ ಚಿತ್ರಮಂದಿರಗಳಲ್ಲಿ ಅದ್ದೂರಿ ಬಿಡುಗಡೆಗೊಳ್ಳಲು ದಿನಗಣನೆ ಆರಂಭವಾಗಿದ್ದು, ಈ ನಡುವೆ ಲೋಕೇಶ್ ಕನಕರಾಜ್ ತಮ್ಮ ಸಿನಿಮಾ ಭರ್ಜರಿ ಯಶಸ್ಸನ್ನು ಗಳಿಸಲಿ ಎಂದು ತಮ್ಮ ಚಿತ್ರದ ಬರಹಗಾರ ಮತ್ತು ಇತರರೊಡನೆ ತಿರುಪತಿ ತಿಮ್ಮಪ್ಪನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಭೇಟಿ ನೀಡಿದ್ದು, ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ಫೋಟೋ ನೋಡಿದ ನೆಟ್ಟಿಗರು ಚಿತ್ರತಂಡಕ್ಕೆ ಯಶಸ್ವಿಯಾಗಲಿ ಎಂದು ಶುಭಕೋರಿದ್ದಾರೆ.
ಚಿತ್ರದಲ್ಲಿ ಸಂಜಯ್ ದತ್, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಗೌತಮ್ ವಾಸುದೇವ್ ಮೆನನ್, ಮನ್ಸೂರ್ ಅಲಿ ಖಾನ್ ಮುಂತಾದವರ ತಾರಾಗಣವಿದೆ. ಸೆವೆನ್ ಸ್ಕ್ರೀನ್ ಸ್ಟುಡಿಯೋ ನಿರ್ಮಿಸಿಲಾದ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ,(ಏಜೆನ್ಸೀಸ್).