ಭಟ್ಕಳ: ಚಿರತೆಯೊಂದರ ಶವ ಭಟ್ಕಳ ತಾಲೂಕಿನ ಬೆಳಕೆ ಪಂಚಾಯಿತಿ ವ್ಯಾಪ್ತಿಯ ಅರುಕಿ ರೋಡ್‌ನಲ್ಲಿ ಸೋಮವಾರ ಪತ್ತೆಯಾಗಿದೆ. ಸುಮಾರು ಹತ್ತು ವರ್ಷ ವಯಸ್ಸಿನ ಚಿರತೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ. ಚಿರತೆಯ ಬಾಲಕ್ಕೆ ವಿದ್ಯುತ್ ತಂತಿ ತಗುಲಿರುವ ಗುರುತು ಪತ್ತೆಯಾಗಿದ್ದು, ಎತ್ತರದ ಪ್ರದೇಶದಿಂದ ಧುಮುಕುವ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿರಬಹುದು ಎಂದು ಶಂಕಿಸಲಾಗಿದೆ.
ಆದರೆ ಮೃತ ಚಿರತೆಯ ಉಗುರುಗಳು ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದು ನಿಜಕ್ಕೂ ಆಕಸ್ಮಿಕವಾಗಿ ನಡೆದ ಘಟನೆಯೋ ಅಥವಾ ಉಗುರುಗಳಿಗೋಸ್ಕರ ಉದ್ದೇಶಪೂರ್ವಕವಾಗಿ ಚಿರತೆಯನ್ನು ಹತ್ಯೆ ಮಾಡಲಾಗಿದೆಯೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಳಿಕ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿರಿ ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು