ನ್ಯೂಸ್

ಬೋನಿನಲ್ಲಿ ಸೆರೆಯಾದ ಚಿರತೆ

Mysuru Rural

ನಂಜನಗೂಡು: ತಾಲೂಕಿನ ಹದಿನಾರು ಗ್ರಾಮದ ಹೊರವಲಯದಲ್ಲಿ ಮೂರು ವರ್ಷದ ಗಂಡು ಚಿರತೆ ಭಾನುವಾರ ಮುಂಜಾನೆ ಬೋನಿನಲ್ಲಿ ಸೆರೆಯಾಗಿದೆ.
ಒಂದು ವಾರದಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಭೀತಿ ಮೂಡಿಸಿದ್ದ ಚಿರತೆ ಬಂಧಿಯಾಗಿರುವುದು ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ. ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಜೇಮ್ಸ್ ಜೇಕಬ್ ಎಂಬುವರ ಜಮೀನಿನಲ್ಲಿ ಎರಡು ದಿನಗಳ ಹಿಂದೆ ಬೋನು ಇಡಲಾಗಿತ್ತು. ಚಿರತೆ ಸೆರೆಸಿಕ್ಕ ವಿಷಯ ತಿಳಿಯುತ್ತಿದ್ದಂತೆ ಉಪ ವಲಯಾರಣ್ಯಾಧಿಕಾರಿ ಮದನ್‌ಕುಮಾರ್, ಅರಣ್ಯ ರಕ್ಷಕ ಶರತ್, ವೀಕ್ಷಕ ಅಂಕಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇಲಧಿಕಾರಿಗಳ ಆದೇಶದ ಮೇರೆಗೆ ಚಿರತೆಯನ್ನು ಬಂಡೀಪುರ ಅಭಯಾರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.