ನ್ಯೂಸ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ 125 ವರ್ಷ ಬದುಕಲಿ: ಶುಭ ಹಾರೈಸುತ್ತಲೇ ರಾಜನಾಥ್ ಸಿಂಗ್ ಟಾಂಗ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಇಳಿಸುವವರೆಗೂ ಬದುಕಿರುತ್ತೇನೆ ಎಂಬ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು 125 ವರ್ಷ ಬದುಕಲಿ ಮತ್ತು ಪ್ರಧಾನಿ ಮೋದಿ 125 ವರ್ಷಗಳ ಕಾಲ ಪ್ರಧಾನಿಯಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ’ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ನಡೆಯುತ್ತಿದೆ. “ಕಾಂಗ್ರೆಸ್ ಮುಖ್ಯಸ್ಥರು 125 ವರ್ಷಗಳ ಕಾಲ ಬದುಕಲಿ ಮತ್ತು ಪ್ರಧಾನಿ ಮೋದಿ 125 ವರ್ಷಗಳ ಕಾಲ ಅಧಿಕಾರದಲ್ಲಿ ಇರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಕ್ಟೋಬರ್ 5 ರಂದು ಒಂದೇ ಹಂತದ ಮತದಾನದ ಮೊದಲು ಹರಿಯಾಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಕಾಂಗ್ರೆಸ್ ಮುಖ್ಯಸ್ಥರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರು "ಇಷ್ಟು ಬೇಗ ಸಾಯುವುದಿಲ್ಲ" ಮತ್ತು "ಪ್ರಧಾನಿ ಅಧಿಕಾರದಲ್ಲಿರುವ ತನಕ ಜೀವಂತವಾಗಿರುತ್ತಾರೆ" ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ವೇಳೆ ನನಗೆ ಈಗ 83 ವರ್ಷ, ನಾನು ಇಷ್ಟು ಬೇಗ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದು ಗಮನಾರ್ಹ. ಕಥುವಾದಲ್ಲಿ ಪ್ರಚಾರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಖರ್ಗೆ ವೇದಿಕೆಯಲ್ಲಿ ಅನಾರೋಗ್ಯಕ್ಕೆ ಒಳಗಾದರು. ಆಗ ಅವರ ಭದ್ರತಾ ಸಿಬ್ಬಂದಿ ಮತ್ತು ಇತರೆ ಕಾಂಗ್ರೆಸ್ ನಾಯಕರು ಸಹಾಯ ಮಾಡಿದರು. ಸ್ವಲ್ಪ ಹೊತ್ತಿನ ವಿರಾಮದ ನಂತರ ಅವರು ತಮ್ಮ ಭಾಷಣವನ್ನು ಮುಂದುವರೆಸಿದರು ಮತ್ತು ವಿವಾದಾತ್ಮಕ ಹೇಳಿಕೆಯನ್ನು ನೀಡಿದರು.