ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್‌ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ B Y Vijayendra ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಮೃತ ಗುತ್ತಿಗೆದಾರನ ಡೆತ್‌ನೋಟ್ ಸಹಿತ ಸಂದೇಶ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಮಂತ್ರಿಗಳು ತಮ್ಮ ಬಲಗೈ ಬಂಟರು ಹಾಗೂ ಆಪ್ತ ಸಹಾಯಕರಿಗೆ ಜನರಲ್ ಪವರ್ ಆ್ ಅಟಾರ್ನಿ (ಜಿಪಿಎ) ನೀಡಿದಂತಿದೆ ಎಂದು ಕುಟುಕಿದ್ದಾರೆ.
ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಸುವರ್ಣ ವಿಧಾನಸೌಧಕ್ಕೆ ನುಗ್ಗಿ ಶಾಸಕ ಸಿ.ಟಿ.ರವಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಇನ್ನೂ ಹಸಿಯಾಗಿದೆ.
ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಕಿರುಕುಳ, ಬೆದರಿಕೆಗೆ ತತ್ತರಿಸಿದ್ದ ಬೀದರ್‌ನ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜತೆಗೆ ಆತ್ಮಹತ್ಯೆ ಭಾಗವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥರಾಗಿಸಲು ಹೊರಟಿದೆ ಎಂದು ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
ಪ್ರತಿಯೊಂದು ವಿಷಯದಲ್ಲಿ ಅನಗತ್ಯ ಮೂಗು ತೂರಿಸಿ ತಮ್ಮ ನಡೆ ನುಡಿಗಳಲ್ಲಿ ದಾಷಟ್ಯೆತನ ಪ್ರದರ್ಶಿಸುವ ಸಚಿವ ಪ್ರಿಯಾಂಕ್ ಖರ್ಗೆ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂಬುದು ದುರ್ದೈವಿ ಗುತ್ತಿಗೆದಾರ ಸಚಿನ್ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ಪ್ರಿಯಾಂಕ್ ಖಗೆರ್ಯವರ ರಾಜೀನಾಮೆ ಪಡೆಯಲಿ ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅಧಿಕಾರ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ನಲುಗಿ ಹೋಗಿದ್ದಾರೆ. ವಿಪರೀತ ಆರ್ಥಿಕ ಒತ್ತಡ ಅವರನ್ನು ಆತ್ಮಹತ್ಯೆ ಪ್ರೇರೇಪಿಸುತ್ತಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.
ಸಚಿವರ ಕೈಕೆಳಗಿನ ಅಧಿಕಾರಿಗಳು ಹಾಗೂ ಆಪ್ತರ ಒತ್ತಡಗಳು ಗುತ್ತಿಗೆದಾರರನ್ನು ಉಸಿರುಗಟ್ಟಿಸುತ್ತಿವೆ. ಪ್ರಿಯಾಂಕ್ ಖರ್ಗೆ ಬಲಗೈ ಬಂಟ, ಕಾಂಗ್ರೆಸ್ ಮುಖಂಡ ರಾಜುವಿನ ದೌರ್ಜನ್ಯಕ್ಕೆ ಸಿಲುಕಿ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರು ಬರೆದಿಟ್ಟಿರುವ ಪತ್ರ ಇದಕ್ಕೆ ಸಾಕ್ಷಿ ಒದಗಿಸಿದೆ.
ಪೊಲೀಸ್ ಅಧಿಕಾರಿಗಳು ಪಕ್ಷಪಾತಿಗಳಂತೆ ವರ್ತಿಸುವುದನ್ನು ಬಿಟ್ಟು ಪಾರದರ್ಶಕವಾಗಿ ತನಿಖೆ ನಡೆಸದಿದ್ದರೆ ಗಂಭೀರವಾಗಿ ಪರಿಗಣಿಸಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವವರೆಗೂ ಪಕ್ಷ ಹೋರಾಟ ನಡೆಸಲಿದೆ ಎಂದು ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.
ಸಾವಿಗೀಡಾದ ನತದೃಷ್ಟ ಸಚಿನ್ ಆತ್ಮಕ್ಕೆ ಶಾಂತಿ ಲಭಿಸಲಿ. ಈ ಕೂಡಲೇ ನೊಂದ ಕುಟುಂಬಕ್ಕೆ ಸರ್ಕಾರ ಪರಿಹಾರ ೋಷಿಸಿ, ಸಚಿನ್ ಪಡೆದಿದ್ದ ಗುತ್ತಿಗೆ ಕೆಲಸಗಳ ಬಾಕಿ ಹಣವನ್ನು ಪಾವತಿಸಿ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುವ ಮೂಲಕ ನ್ಯಾಯ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.