ಕನಕಗಿರಿಯ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಭಿವಿನ್ಯಾಸ ಕಾರ್ಯಕ್ರಮವನ್ನು ಪ್ರಾಚಾರ್ಯ ಭಜರಂಗಬಲಿ ಉದ್ಘಾಟಿಸಿದರು. ಐಕ್ಯೂಎಸಿ ಸಂಯೋಜಕ ಎ.ರಕ್ಷಿತ್, ಸಹಾಯಕ ಪ್ರಾಧ್ಯಾಪಕರಾದ ಡಾ. ವೀರೇಶ, ಎನ್.ಕೆ.ಲಲಿತಾ, ಟಿ.ಆರ್.ಸರ್ವಮಂಗಳಮ್ಮ ಇತರರಿದ್ದರು. 
ನ್ಯೂಸ್

ವಿದ್ಯಾರ್ಥಿಗಳು ಓದಿನಲ್ಲಿ ಶ್ರಮ ವಹಿಸಲಿ

ಗಾಯತ್ರಿ ಮಾಲಿಪಾಟೀಲ್

ಕನಕಗಿರಿ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ಓದಿನಲ್ಲಿ ಶ್ರಮ ವಹಿಸಬೇಕು ಎಂದು ಸಹಾಯಕ ಪ್ರಾಧ್ಯಾಪಕ ಡಾ.ವೀರೇಶ ಹೇಳಿದರು.

ಪಟ್ಟಣದ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಪ್ರಮುಖ ಘಟ್ಟವಾಗಿದೆ. ಸಮಯ ವ್ಯರ್ಥಮಾಡದೇ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯುವ ಗುರಿಯೊಂದಿಗೆ ಅಭ್ಯಾಸದ ಕಡೆ ಗಮನ ಹರಿಸಿ ಎಂದರು.

ಪ್ರಾಚಾರ್ಯ ಡಾ.ಭಜರಂಗ ಬಲಿ ಮಾತನಾಡಿ, ಇಂದು ಪ್ರತಿ ಕ್ಷೇತ್ರದಲ್ಲಿಯೂ ಪ್ರತಿಸ್ಪರ್ಧಿಗಳಿದ್ದಾರೆ. ಭವಿಷ್ಯದ ಬಗ್ಗೆ ಪೂರಕ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿ ಹಾಗೂ ಬದ್ಧತೆಯಿಂದ ಕಾರ್ಯರೂಪಕ್ಕೆ ತರಲು ಹೆಚ್ಚು ಶ್ರಮವಹಿಸಬೇಕು ಎಂದು ತಿಳಿಸಿದರು. ಐಕ್ಯೂಎಸಿ ಸಂಯೋಜಕ ಎ.ರಕ್ಷಿತ್, ಸಹಾಯಕ ಪ್ರಾಧ್ಯಾಪಕರಾದ ಎನ್.ಕೆ.ಲಲಿತಾ, ಟಿ.ಆರ್.ಸರ್ವಮಂಗಳಮ್ಮ, ದತ್ತಾಂಶ ನಮೂದು ಸಹಾಯಕಿ ಸಿ.ಜ್ಯೋತಿ ಇತರರಿದ್ದರು.