ಶಿಕಾರಿಪುರದಲ್ಲಿ ಡೆಂೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಅಪರಾಧ ನಿಯಂತ್ರಣ ಸಂಸ್ಥೆ ಸದಸ್ಯರು ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿದರು. ಯುವರಾಜ್, ಇಮ್ತಿಯಾಜ್, ನಾಗರಾಜಯ್ಯ, ಗದಿಗೆಯ್ಯ ಇತರರಿದ್ದರು.  
ನ್ಯೂಸ್

ಜ್ವರ ನಿಯಂತ್ರಣಕ್ಕೆ ಪುರಸಭೆ ಕ್ರಮ ಕೈಗೊಳ್ಳಲಿ

ಶಿಕಾರಿಪುರ: ಪಟ್ಟಣದಲ್ಲಿ ಡೆಂೆ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿವೆ. ಸೊಳ್ಳೆಗಳ ನಿಯಂತ್ರಣಕ್ಕೆ ಪುರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಅಪರಾಧ ನಿಯಂತ್ರಣ ಸಂಸ್ಥೆ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಡೆಂೆ ಬಗ್ಗೆ ಪುರಸಭೆ ಅಧಿಕಾರಿಗಳು ನಿರ್ಲಕ್ಷೃ ತೋರುತ್ತಿದ್ದಾರೆ. ಖಾಲಿ ನಿವೇಶನಗಳಲ್ಲಿ, ನೀರಿನ ಗುಂಡಿಗಳಲ್ಲಿ ಸೊಳ್ಳೆಗಳ ಪ್ರಮಾಣ ಜಾಸ್ತಿಯಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಪುರಸಭೆ ಆಡಳಿತದಿಂದ ಆಗುತ್ತಿಲ್ಲ ಎಂದು ಸಂಸ್ಥೆ ಅಧ್ಯಕ್ಷ ಯುವರಾಜ್ ಆರೋಪಿಸಿದರು.
ಡೆಂೆ ಪ್ರಕರಣಗಳಿಂದ ಜನ ಆತಂಕದಲ್ಲಿದ್ದಾರೆ. ಪುರಸಭೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸೊಳ್ಳೆಗಳ ನಿಯಂತ್ರಣ ಮಾಡಬೇಕು. ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ವೈರಾಣು ಜ್ವರದಿಂದ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪುರಸಭೆ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು. ಇಮ್ತಿಯಾಜ್, ನಾಗರಾಜಯ್ಯ, ಸುರೇಶ್ ನಾಯ್ಕ, ಗದಿಗೆಪ್ಪ, ಅಹ್ಮದ್ ಅಲಿ ಇತರರಿದ್ದರು.