ಶ್ರೀದತ್ತ 
ನ್ಯೂಸ್

ಕಾಲ್ತುಳಿತ ದುರಂತ ಮರುಕಳಿಸದಂತೆ ಎಚ್ಚರ ವಹಿಸಲಿ

ಹುಣಸೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ಪ್ರಕರಣ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ತೀರ್ಮಾನದ ಪರಿಣಾಮವಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀದತ್ತ ಆರೋಪಿಸಿದರು.

18 ವರ್ಷಗಳ ನಂತರ ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನಿಸಲು ವಿಧಾನಸೌಧದ ಭದ್ರತಾ ವಿಭಾಗದ ಡಿಸಿಪಿ ಎಂ.ಎನ್ ಕರಿಬಸವನಗೌಡರ ಎಚ್ಚರಿಕೆಯ ನಡುವೆಯೂ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಕಾರ್ಯಕ್ರಮದ ಆತುರದ ಯೋಜನೆ ಹಾಗೂ ವ್ಯವಸ್ಥಿತ ತಯಾರಿ ಇಲ್ಲದೆ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯ ಆಯೋಜನೆಯ ಪರಿಣಾಮ 11 ಜನರ ಸಾವಿಗೀಡಾಗಿದ್ದು ಈ ನಾಡಿನ ದುರ್ದೈವ. ಉನ್ಮಾದದಲಿದ್ದ ಯುವ ಜನತೆ, ಕಾಂಗ್ರೆಸ್ ಸರ್ಕಾರದ ಎಡಬಿಡಂಗಿ ನಿಲುವು, ಲಕ್ಷಾಂತರ ಜನ ಸೇರಬಹುದಾದ ನಿರೀಕ್ಷೆಯಲ್ಲಿದ್ದ ಕಾರ್ಯಕ್ರಮದ ಅಪಾಯಗಳು ಮತ್ತು ಸವಾಲುಗಳ ಬಗೆಗೆ ಅರಿವಿದ್ದು ತೋರಿದ ತಿಳಿಗೇಡಿತನದ ಪರಿಣಾಮ ದುರಂತ ಸಂಭವಿಸಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳ ಆಕ್ರಂದನ ರಾಜ್ಯದ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಬೇಕೆಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಪರಕಟಣೆಯಲ್ಲಿ ಒತ್ತಾಯಿಸಿದ್ದಾರೆ.