ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರಮಿಸೋಣ  
ನ್ಯೂಸ್

ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರಮಿಸೋಣ

ಎಚ್.ಡಿ.ಕೋಟೆ : ಜೆಡಿಎಸ್ ಪಕ್ಷದ ಕಾರ್ಯಕರ್ತರು ಹತ್ತು ವರ್ಷಗಳಿಂದ ತಾಲೂಕಿನಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಂಡಿದ್ದೀರೋ ಅದನ್ನು ನನಸು ಮಾಡಲು ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ತಿಳಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಗೆ ಕೆ.ಎಂ. ಕೃಷ್ಣನಾಯಕರನ್ನು ಸೋಮವಾರ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ ಬರಮಾಡಿಕೊಂಡ ನಂತರ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಪಕ್ಷದ ಶಾಸಕರು ಇಲ್ಲದೆ ಕಾರ್ಯಕರ್ತರು ಅನುಭವಿಸಿದ ನೋವನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಾಸಕರನ್ನು ಆಯ್ಕೆ ಮಾಡುವಲ್ಲಿ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು.

ಮುಂದಿನ ಎರಡು ಮೂರು ತಿಂಗಳಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮಲ್ಲಿರುವ ಅಸಮಾಧಾನ ಮರೆತು ಪಕ್ಷದ ಅಭ್ಯರ್ಥಿಗಳು ಆಯ್ಕೆ ಆಗುವಂತೆ ಶ್ರಮವಹಿಸಬೇಕು. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಆಗಬೇಕು ಎಂದು ತಿಳಿಸಿದರು.

ತಾಲೂಕು ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ, ದುರಾಡಳಿತ, ಹಗರಣಗಳಲ್ಲಿ ರಾಜ್ಯ ಸರ್ಕಾರ ತೊಡಗಿದೆ, ರಾಜ್ಯದ ಅಭಿವೃದ್ಧಿಗೆ ಹಣಕಾಸಿನ ಕೊರತೆ ಯಾಗಿದ್ದು ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿದರು.

ತಾಲೂಕಿನಲ್ಲಿ ಮಾಜಿ ಶಾಸಕರು ಸೇರಿದಂತೆ ಎಲ್ಲ ಮುಖಂಡರನ್ನು ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ದುಡಿಯುತ್ತೇನೆ. ಸೆಪ್ಟೆಂಬರ್ ಎರಡನೇ ವಾರದಲ್ಲಿ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಮಿಸ ಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದರು. ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ನೂರಾರು ಮುಖಂಡರು ಜೆಡಿಎಸ್ ಪಕ್ಷ ಸೇರಿದರು.

ಬೆಂಗಳೂರಿನ ಜೆಪಿ ಭವನದಲ್ಲಿ ಪಕ್ಷಕ್ಕೆ ಸೇರ್ಪಡೆ ಗೊಂಡ ನಂತರ ಮೊದಲ ಬಾರಿಗೆ ತಾಲೂಕಿಗೆ ಭೇಟಿ ನೀಡಿದ ಕೃಷ್ಣ ನಾಯಕ ಅವರು ಮೊದಲಿಗೆ ಜಿ.ಬಿ. ಸರಗೂರಿನ ಕಾಶಿವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕ್ಯಾತನಹಳ್ಳಿ, ಹಂಪಾಪುರ- ಹೊಮ್ಮರಗಳ್ಳಿ ಮಾರ್ಗವಾಗಿ ಹ್ಯಾಂಡ್ ಪೋಸ್ಟ್ ತಲುಪಿ ಗಣೇಶ ದೇವಸ್ಥಾನಕ್ಕೆ ಪೂಜೆ ನೆರವೇರಿಸಿ ದರು. ದಾರಿಯುದ್ದಕ್ಕೂ ಕೃಷ್ಣನಾಯಕರಿಗೆ ಜೆಡಿಎಸ್ ಪಕ್ಷದ ಕಾರ್ಯ ಕರ್ತರು ಹಾಗೂ ಮುಖಂಡರು ಹಾರ ತುರಾಯಿ ಹಾಕಿ ಜೈಕಾರ ಹಾಕಿ ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಿಂದ ಕೃಷ್ಣ ನಾಯಕರು ಸಾವಿರಾರು ಕಾರ್ಯಕರ್ತರ ಜತೆ ಕಾಲ್ನಡಿಗೆ ಮೂಲಕ ಜೆಡಿಎಸ್ ಕಚೇರಿಗೆ ಆಗಮಿಸಿ ಪೂಜೆ ಸಲ್ಲಿಸಿದರು. ಎಚ್.ಡಿ.ಕೋಟೆ ಜೆಡಿಎಸ್ ಅಧ್ಯಕ್ಷ ರಾಜೇಂದ್ರ, ಸರಗೂರು ಅಧ್ಯಕ್ಷ ಗೋಪಾಲಸ್ವಾಮಿ, ಮಾಜಿ ಅಧ್ಯಕ್ಷರಾದ ಕೆರೆಯೂರು ನಾಗರಾಜು, ನರಸಿಂಹೇಗೌಡ, ಲಿಂಗೇಗೌಡ, ಸಿಂಡೇನ ಹಳ್ಳಿ ಯತೀಶ್, ಶ್ಯಾಮ್ ಸುಂದರ್, ಮಳಲಿ ಶಾಂತಕುಮಾರ್, ಡಿ.ಆರ್.ಮಹೇಶ್, ಎಂ.ಡಿ ಮಂಚಯ್ಯ, ಹೋ.ಕೆ.ಮಹೇಂದ್ರ, ಗೆಂಡತ್ತೂರು ಪ್ರಕಾಶ್, ಸಿದ್ದೇಗೌಡ, ಸುದೀರ್, ಮಾಯಿ ಗೌಡ, ಶಶಿಧರ್, ಯೋಗ ನರಸಿಂಹ, ಎಚ್.ಪಿ. ಪ್ರಕಾಶ್, ಪ್ರಶಾಂತ್, ಪ್ರಸನ್ನ, ಶಿವಯ್ಯ, ಕಾಳಪ್ಪಾಜಿ, ಕೃಷ್ಣಪ್ಪ, ಶಿವಪ್ಪ ಶೆಟ್ಟಿ, ನಾಗೇಂದ್ರ, ಸತೀಶ್, ನಾಗೇಗೌಡ, ಶಿವಕುಮಾರ್, ಮಾಯಪ್ಪ ಇತರರು ಇದ್ದರು.