Fist hand power logo. Protest strong fist raised fight icon, rebel illustration 
ನ್ಯೂಸ್

ಮೈಸೂರು ನಗರ ಕಾಂಗ್ರೆಸ್‌ನಿಂದ ಪತ್ರ ಚಳವಳಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಪತ್ರ ಚಳವಳಿ ನಡೆಸಲಾಯಿತು.
ಅಶೋಕ ರಸ್ತೆಯ ಮುಖ್ಯ ಅಂಚೆ ಕಚೇರಿ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು, ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗೆ ಪತ್ರ ಕಳುಹಿಸಿದರು.
ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 550 ಎಕರೆ ಜಮೀನನ್ನು ಗಣಿಗಾರಿಕೆ ನಡೆಸಲು ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂಬ ಆರೋಪ ಇದೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತರು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಆದರೆ ರಾಜ್ಯಪಾಲರು ಕುಮಾರಸ್ವಾಮಿ ವಿರುದ್ಧ ಕೇಳಿ ಬಂದಿರುವ ಅಕ್ರಮದ ತನಿಖೆ ನಡೆಸಲು ಅನುಮತಿ ನೀಡದೆ ವಿಳಂಬ ಮಾಡುತ್ತಿದ್ದಾರೆ. ಜತೆಗೆ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಅವರ ವಿರುದ್ಧ ದೂರು ನೀಡಿದ್ದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ. ಆದರೆ ಸಿದ್ದರಾಮಯ್ಯ ಅವರ ವಿರುದ್ಧ ಆತುರದಲ್ಲಿ ಅನುಮತಿ ನೀಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು. ಮೈಸೂರು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್, ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ರಾಜೇಂದ್ರ ಪಾಂಡವಪುರ, ಮುಖಂಡರಾದ ರಂಗಸ್ವಾಮಿ, ಎಸ್.ಎ.ರಹೀಂ, ಸಿದ್ದರಾಜು, ರಾಜಣ್ಣ, ಕುಮಾರ್ ಇದ್ದರು.