ನ್ಯೂಸ್

ಹೆಚ್ಚುವರಿ ಪಟ್ಟಿ ಪ್ರಕಟಿಸದಿದ್ದರೆ ಪತ್ರ ಚಳವಳಿ: ಕೆಪಿಎಸ್ಸಿಗೆ ಹುದ್ದೆ ಆಕಾಂಕ್ಷಿಗಳ ಎಚ್ಚರಿಕೆ

ಬೆಂಗಳೂರು ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಒತ್ತಾಯಿಸಿ ಹುದ್ದೆ ಆಕಾಂಕ್ಷಿಗಳು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಚಳವಳಿ ನಡೆಸಲು ನಿರ್ಧರಿಸಿದ್ದಾರೆ.

ಕೆಪಿಎಸ್ಸಿ ಕಳೆದ ಹಲವಾರು ವರ್ಷಗಳಿಂದ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ ಆಸಕ್ತಿ ತೋರಿಸುತ್ತಿಲ್ಲ. ಈ ಕಾರಣದಿಂದ ಕಾರ್ಯದರ್ಶಿಗಳು ಮತ್ತು ಅಧ್ಯಕ್ಷರಿಗೆ ಪತ್ರ ಬರೆದು ಒತ್ತಾಯ ಮಾಡುವ ಮೂಲಕ ಹೊಸ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಆಕಾಂಕ್ಷಿಯೊಬ್ಬರು ತಿಳಿಸಿದರು.

ಇದಕ್ಕೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಕೂಡ ಕೈಜೋಡಿಸುತ್ತಿವೆ. ರಾಜ್ಯಾದ್ಯಂತ ಇರುವ ಆಕಾಂಕ್ಷಿಗಳು ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆಯನ್ನು ತಿಳಿಸಬೇಕು. ಅದಾದ ಬಳಿಕವೂ ಪಟ್ಟಿ ಪ್ರಕಟಿಸದಿದ್ದರೆ, ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಯರ್, ಜೂನಿಯರ್ ಇಂಜಿನಿಯರ್ ಸೇರಿ ವಿವಿಧ ಇಲಾಖೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸುತ್ತಿಲ್ಲ ಎಂದು ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ.