ಚಿಕ್ಕಮಗಳೂರು ನಗರದ ಜ್ಲಿಲಾ ಗ್ರಂಥಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಗ್ರಂಥಪಾಲಕರ ದಿನಾಚರಣೆ ಹಾಗೂ ಪುಸ್ತಕ ಪ್ರದರ್ಶನ ಕಾರ್ಯಕ್ರಮದಲ್ಲಿ ಗ್ರಂಥಪಾಲಕ ಸಿದ್ದಪ್ಪ ಮಾತನಾಡಿದರು. 
ನ್ಯೂಸ್

ಗ್ರಂಥಾಲಯ ಜ್ಞಾನದ ಬಂಡಾರ

ಕಿರುವಾರ ಎಸ್.ಸುದರ್ಶನ್

ಚಿಕ್ಕಮಗಳೂರು: ಓದುಗರಿಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಹಲವು ಪುಸ್ತಕಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಓದುಗರು ಇದರ ಪ್ರಯೋಜನೆ ಪಡೆದುಕೊಳ್ಳಬೇಕು, ಗ್ರಂಥಾಲಯಗಳು ಜ್ಞಾನದ ಬಂಡಾರ ಇದ್ದಂತೆ ಎಂದು ಗ್ರಂಥಪಾಲಕ ಸಿದ್ದಪ್ಪ ಅಭಿಪ್ರಾಯಪಟ್ಟರು.

ಇಲ್ಲಿನ ಜ್ಲಿಲಾ ಗ್ರಂಥಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಗ್ರಂಥಪಾಲಕರ ದಿನಾಚರಣೆ ಹಾಗೂ ಪುಸ್ತಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿ ಪ್ರಾರಂಭಿಸಿದ್ದು, ಪ್ರತಿಯೊಬ್ಬರು ಸದಸ್ಯತ್ವ ಪಡೆದುಕೊಂಡಾದ ಇಲ್ಲಿ ಲಭ್ಯವಿರುವ ಪುಸ್ತಕಗಳನ್ನು ಡಿಜಿಟಲ್‌ನಲ್ಲೂ ಓದಿಕೊಳ್ಳಬಹುದು ಎಂದರು.
ಜಿಲ್ಲಾ ಗ್ರಂಥಾಲಯದಲ್ಲಿ 900 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಇವೆ. ಪುಸ್ತುಕಗಳನ್ನು ಓದುವ ಅವ್ಯಾಸವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಪಾಲಿಗೆ ಉತ್ತಮ ಸ್ನೇಹಿತರಿದ್ದಂತೆ. ಅಂತಹ ಪುಸ್ತಕಗಳು ಇರುವ ಗ್ರಂಥಾಲಯಗಳು ಜ್ಞಾನ ಭಂಡಾರದ ನಿಧಿಯಂತೆ. ಎಲ್ಲರೂ ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥ್ ಅವರ ಜನ್ಮ ದಿನಾಚರಣೆಯನ್ನು ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಗ್ರಂಥಾಲಯ ವಿಜ್ಞಾನಕ್ಕೆ ಹೆಚ್ಚು ಮನ್ನಣೆ ತಂದುಕೊಟ್ಟವರು ರಂಗನಾಥ್. ಆಧುನಿಕ ತಂತ್ರಜ್ಞಾನ ಕಾಲದಲ್ಲಿ ಗ್ರಂಥಾಲಯಗಳು ಡಿಜಿಟಲೀಕರಣಗೊಳ್ಳುತ್ತಿವೆ. ಬೆರಳ ತುದಿಯಲ್ಲಿಯೇ ಪುಸ್ತಕಗಳನ್ನು ಓದಿ ಮಾಹಿತಿ ಸಂಗ್ರಹಿಸಿಕೊಳ್ಳಲು ಸಾಧ್ಯವಾಗುತ್ತಿದೆ, ಜಿಲ್ಲೆಯಲ್ಲಿ 1,29,432 ಸದಸ್ಯತ್ವ ಹೊಂದಿದ್ದಾರೆ ಎಂದರು.
ಪುಸ್ತಕಗಳು ಒಂದೆಡೆ ಲಭ್ಯವಾಗುವುದರಿಂದ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಅನುಕೂಲಕರ. ಗ್ರಂಥಾಲಯಗಳಲ್ಲಿ ಕುಳಿತು ಪುಸ್ತಕಗಳನ್ನು ಓದಿದವರು ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಗ್ರಂಥಾಲಯ ತನ್ನ ಮೌಲ್ಯ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ, ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಮುಂದುವರೆಯುತ್ತಿದ್ದರು ಗ್ರಂಥಾಲಯಕ್ಕೆ ಬರುವವರ ಸಂಖ್ಯೆಯು ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ಸಹಾಯಕ ಪಾಲಕ ರಾಘವೇಂದ್ರ ಮಾತನಾಡಿ, ಉತ್ತಮ ಪುಸ್ತಕಗಳ ಓದಿನಿಂದ ಹೆಚ್ಚಿನ ಜ್ಞಾನಾರ್ಜನೆ ಸಾಧ್ಯವಾಗುತ್ತದೆ. ಒಳ್ಳೆಯ ಅನುಭವ ಪಡೆದುಕೊಳ್ಳಲು ನೆರವಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳಬೇಕು ಎಂದರು.
ಗ್ರಂಥಾಲಯದ ಸಹಾಯಕ ಮಂಜುನಾಥ್ ಸ್ವಾಮಿ, ಸಿಬ್ಬಂದಿ ಬಿ.ರೂಪ, ಸೌಮ್ಯ, ಲೋಕೇಶ್ ಮತಿತರರು ಹಾಜರಿದ್ದರು.