ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಗೃಹದಲ್ಲಿ ನಿಗದಿಗಿಂತ ಹೆಚ್ಚು ಶುಲ್ಕ ಸಂಗ್ರಹಿಸುವ ಬಗ್ಗೆ ದೂರುಗಳು ಬಂದಿವೆ. ಇಲ್ಲಿ ಬೇಕಾಬಿಟ್ಟಿಯಾಗಿ ಶುಲ್ಕ ಸಂಗ್ರಹಿಸುವಂತಿಲ್ಲ. ಒಂದು ವೇಳೆ ಹೆಚ್ಚುವರಿ ಶುಲ್ಕ ಸಂಗ್ರಹಿಸಿದ್ದು ಗೊತ್ತಾದರೆ ಮರುಕ್ಷಣವೇ ಗುತ್ತಿಗೆದಾರರ ಪರವಾನಗಿ ರದ್ದುಪಡಿಸುವಂತೆ ನಿಗಮದ ಜಿಲ್ಲಾ ನಿಯಂತ್ರಣಾಧಿಕಾರಿ ನವೀನ್‌ಕುಮಾರ್‌ಗೆ ಉಪ ಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು. ಈಗಾಗಲೇ ಎಂಟು ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ನವೀನ್‌ಕುಮಾರ್ ಹೇಳಿದರು. ಲೋಕಾಯುಕ್ತ ಜಿಲ್ಲಾ ನ್ಯಾಯಾಧೀಶ ಲೋಕಪ್ಪ ಮಾತನಾಡಿ, ಶೇ.20ರಷ್ಟು ಮಾತ್ರ ಸಿಸಿ ಕ್ಯಾಮರಾ ಕೆಲಸ ಮಾಡುತ್ತಿವೆ. ಶೇ.80ರಷ್ಟು ಕೆಲಸ ಮಾಡುತ್ತಿಲ್ಲ ಎಂದರು. ಬಳಿಕ ನ್ಯಾ.ಫಣೀಂದ್ರ ಅವರು ಸ್ವತಃ ಸಿಸಿ ಕ್ಯಾಮರಾ ನಿಯಂತ್ರಣಾ ಕೊಠಡಿಗೆ ತೆರಳಿ ಪರಿಶೀಲಿಸಿದರು.
ಲೋಕಾಯುಕ್ತ ಜಿಲ್ಲಾ ನ್ಯಾಯಾಧೀಶರಾದ ಎನ್.ಆರ್.ಲೋಕಪ್ಪ, ನ್ಯಾ. ಜಿ.ವಿ.ವಿಜಯಾನಂದ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್, ಡಿಸಿ ಗುರುದತ್ತ ಹೆಗಡೆ, ಜಿಪಂ ಸಿಇಒ ಎನ್.ಹೇಮಂತ್, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಇತರರಿದ್ದರು.