ನ್ಯೂಸ್

ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕೊಲೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ,

ಕೋಲಾರದಿಂದ ಆಂಧ್ರಪ್ರದೇಶದ ಚಿತ್ತೂರು ಕಡೆಗೆ ತೆರಳುತ್ತಿದ್ದ ಅವರನ್ನು ಮೊಬೈಲ್ ಲೊಕೇಷನ್ ಆಧರಿಸಿ ಪತ್ತೆ ಮಾಡಿ ಕೋಲಾರ ಜಿಲ್ಲೆಯ ಮುಳಬಾಗಿಲಿನ ನಂಗಲಿ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜರಾಜೇಶ್ವರಿನಗರ ಶಾಸಕರ ವಿರುದ್ಧ ಶುಕ್ರವಾರ ಇಲ್ಲಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು.

ಸದ್ಯ ಶಾಸಕ ಮುನಿರತ್ನ ನಾಯ್ಡು ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.