ನವದೆಹಲಿ: ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನಷ್ಟು ಕಾಲ ಲಾಕ್ಡೌನ್ ವಿಸ್ತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಅವರ ಈ ನಿರ್ಧಾರವನ್ನು ಸಮರ್ಥಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ತನ್ಮೂಲಕ ದೇಶಾದ್ಯಂತ ಇನ್ನಷ್ಟು ಕಾಲ ಲಾಕ್ಡೌನ್ ಮುಂದುವರಿಯುವುದು ನಿಶ್ಚಿತವಾಗಿದೆ.
ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಲಾಕ್ಡೌನ್ ಮುಂದುವರಿಸುವ ಕುರಿತು ಚರ್ಚಿಸಿದ್ದರು. ಈ ಸಂವಾದದಲ್ಲಿ ಬಹುತೇಕ ಸಿಎಂಗಳು ಲಾಕ್ಡೌನ್ ಮುಂದುವರಿಸುವ ಬಗ್ಗೆ ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.