ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದದಲ್ಲಿ ಎಲ್ಲ ಸಚಿವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಅವರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ವೇಳೆ ಬಹುತೇಕ ಸಚಿವರು ಮೇ 16ರವರೆಗೆ ಲಾಕ್ಡೌನ್ ಮುಂದುವರಿಸಲು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಮೇ 16ರವರೆಗೆ ಲಾಕ್ಡೌನ್ ಮುಂದುವರಿದರೆ ರಾಜ್ಯದಲ್ಲಿ ಕೊವಿಡ್ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತದೆ. ಹಾಗಾಗಿ ಅವಧಿ ವಿಸ್ತರಣೆ ಮಾಡಬೇಕು ಎಂದು ತಜ್ಞರೂ ಕೂಡ ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಮೇ 16ರವರೆಗೆ ಲಾಕ್ಡೌನ್ ಮುಂದುವರಿಯಲು ಅವಕಾಶ ಮಾಡಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಮನವಿ ಮಾಡಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ.(ದಿಗ್ವಿಜಯ ನ್ಯೂಸ್)