ನ್ಯೂಸ್

ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ ಕುರಿತು ಲೋಕಸಭೆಯಲ್ಲಿ ಚರ್ಚೆಗೆ ಕೇಂದ್ರ ಸರ್ಕಾರ ಒಪ್ಪಿಗೆ!Parliment

Parliment : ಪಹಲ್ಗಾಮ್ ಉಗ್ರರ ದಾಳಿ ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಲೋಕಸಭೆಯಲ್ಲಿ 16 ಗಂಟೆಗಳ ಕಾಲ ಚರ್ಚಿಸಲು ಕೇಂದ್ರ ಸರ್ಕಾರ ಸೋಮವಾರ ಒಪ್ಪಿಕೊಂಡಿದೆ. ಮುಂದಿನ ವಾರ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದೇ ವಾರದಲ್ಲೇ ಚರ್ಚೆ ನಡೆಸಬೇಕು. ಅಲ್ಲದೆ, ಇದಕ್ಕೆಲ್ಲಾ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಆಗ್ರಹಿಸಿದ ವಿಪಕ್ಷಗಳು, ಜತೆಗೆ ಮಣಿಪುರದ ಸ್ಥಿತಿ, ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚಿಸಬೇಕು ಎಂದು ಒತ್ತಾಯಿಸಿವೆ.

ಆದರೆ, ಈ ವಾರ ಪ್ರಧಾನಿ ವಿದೇಶ ಪ್ರವಾಸದಲ್ಲಿದ್ದು ಮುಂದಿನ ವಾರ ಸದನಕ್ಕೆ ಹಾಜರಾಗುತ್ತಾರೆ. ಆ ವೇಳೆ ಈ ವಿಷಯವನ್ನ ಚರ್ಚೆಗೆ ಎತ್ತಿಕೊಳ್ಳಬಹುದು ಎಂದು ಸರ್ಕಾರದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಸೋಮವಾರದಿಂದ(ಜು.21) ಆರಂಭವಾಗಿರುವ ಸಂಸತ್ ಮಳೆಗಾಲದ ಅಧಿವೇಶನ ಆಗಸ್ಟ್ 12ರವರೆಗೆ ನಡೆಯಲಿದೆ.(ಏಜೆನ್ಸೀಸ್​)