ಬೆಂಗಳೂರು: ಹೋಟೆಲ್ ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದ ಕಾರ್ಮಿಕ ಇಲಾಖೆಯ ಇನ್‌ಸ್ಪೆಕ್ಟರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಕಾರ್ಮಿಕ ಭವನದಲ್ಲಿ ಹಿರಿಯ ಕಾರ್ಮಿಕ ಇನ್‌ಸ್ಪೆಕ್ಟರ್ ಆಗಿರುವ ಭೋಪಾಲ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
ಎಚ್‌ಬಿಆರ್ ಲೇಔಟ್‌ನಲ್ಲಿ ಹೋಟೆಲ್ ತೆರೆಯಲು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಿದ್ದ ದೂರುದಾರರನ್ನು ಸಂಪರ್ಕಿಸಿದ್ದ ಆರೋಪಿ ೯ ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ದೂರುದಾರರಾದ ದೀಕ್ಷಿತ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಹಾಲಪ್ಪ ಬಾಳದಂಡಿ ನೇತೃತ್ವದ ತಂಡ ಆರೋಪಿ ೯ ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿ ಲಂಚದ ಹಣ ಹಾಗೂ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.