ಬಳ್ಳಾರಿ: ಲಾರಿ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಸಿರಗುಪ್ಪದ ಅರಳಿಗನೂರು ಕ್ರಾಸ್ ಬಳಿ ಅಪಘಾತ ನಡೆದಿದೆ. ಬೈಕ್ನಲ್ಲಿದ್ದ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)