ನ್ಯೂಸ್

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ, ಕ್ಷಣಾರ್ಧದಲ್ಲೇ ಭಸ್ಮ

theerthaswamy

ಚಾಮರಾಜನಗರ: ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ‌ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ನಡೆದಿದೆ.

ತಮಿಳುನಾಡಿನಿಂದ ಮೈಸೂರಿಗೆ ಸಿಮೆಂಟ್ ಚೀಲಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿಯ ಎಂಜಿನ್​​ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ಲಾರಿಯೇ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಷಯ ತಿಳಿದ ಚಾಮರಾಜನಗರ ಅಗ್ನಿ ಶಾಮಕ ಸಿಬ್ಬಂದಿ, ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.