ಬೆಂಗಳೂರು: ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟೈರ್ ಬ್ಲಾಸ್ಟ್ ಆದ ಕಾರಣ ಟಿಪ್ಪರ್ ಲಾರಿಯೊಂದು ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ವಿವರ: ಇಂದು ಮಧ್ಯಾಹ್ನ ಸುಮಾರು 4:10ಕ್ಕೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಹೆದ್ದಾರಿಯಲ್ಲಿ ಟೈರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು, ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಹೈವೇಯಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಬಸ್ ಹಾಗೂ ಟಿಪ್ಪರ್ ಚಾಲಕನಿಗೆ ಸಣ್ಣಾಪುಟ್ಟ ಗಾಯಗಳಾಗಿದ್ದು, ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಟಿಪ್ಪರ್ ಮುಂಬಾಗ ಮತ್ತು ಬಸ್ನ ಹಿಂಬಾಗ ಸಂಪೂರ್ಣ ಜಖಂಗೊಂಡಿದ್ದು. ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.