ಹೂವಿನಹಡಗಲಿ: ಮನೆಯವರು ವಿವಾಹಕ್ಕೆ ಒಪ್ಪಿಗೆ ಕೊಡಲಿಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಳಗುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಿಂಗಮ್ಮ (26) ಮತ್ತು ಗುರುರಾಜ್ (30) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ನಿಂಗಮ್ಮ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದವರು ಹಾಗೂ ಗುರುರಾಜ್ ಚಿಲುಗೋಡು ಗ್ರಾಮದ ಯುವಕ. ಕೆಲವು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಅಂತರ್ಜಾತಿ ಹಿನ್ನೆಲೆಯಲ್ಲಿ ಮನೆಯವರು ಮದುವೆಗೆ ನಿರಾಕರಿಸಿದ್ದರು.
ಇದೇ ಬೇಸರದಲ್ಲಿ ಬುಧವಾರ ರಾತ್ರಿ ಇಬ್ಬರೂ ಗ್ರಾಮದ ಹೊರವಲಯಕ್ಕೆ ತೆರಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಹೂವಿನಹಡಗಲಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.